Published
4 months agoon
By
Akkare Newsನವದೆಹಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸೀತಾರಾಂ ಯೆಚೂರಿ (72ವ) ಇಂದು ನಿಧನರಾದರು.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಏಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಅವರು ಕೃತಕ ಉಸಿರಾಟದಲ್ಲಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೆ.12ರಂದು ಕೊನೆಯುಸಿರೆಳೆದಿದ್ದಾರೆ.