Published
3 months agoon
By
Akkare News
ಪುತ್ತೂರು: ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಕುರಿತು ಸೆ.12ರಂದು ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ಸಿದ್ಧರಾಮಯ್ಯ ಅವರಿಗೆ ಜಯ ಸಿಗುವಂತೆ ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಮಧ್ಯಾಹ್ನ ತೀರ್ಪು ಹೊರ ಬರುವ ಹಿನ್ನೆಲೆಯಲ್ಲಿ ಬೆಳಿಗ್ಗೆ ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಮಧ್ಯಾಹ್ನ ಮಹಾಪೂಜೆ ನಡೆಯಲಿದೆ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ಗಂಗಾಧರ ಶೆಟ್ಟಿ, ಸುದೇಶ್ ಚಿಕ್ಕಪುತ್ತೂರು, ರಂಜಿತ್ ಬಂಗೇರ, ಗಿರಿಧರ ಗೌಡ ಸಂಪ್ಯ, ಪ್ರಹ್ಲಾದ್, ಹರೀಶ್ ಬಂಗೇರ ಪಡ್ಡಾಯೂರು ಈ ಸಂದರ್ಭ ಉಪಸ್ಥಿತರಿದ್ದರು. ಅರ್ಚಕ ಕೃಷ್ಣ ಭಟ್ ಪ್ರಾರ್ಥನೆ ಸಲ್ಲಿಸಿದರು.