Published
3 months agoon
By
Akkare News
ಮಳೆಗಾಲ ಸಂದರ್ಭದಲ್ಲಿ ಯಾವುದೇ ಅನಾಹುತ ನಡೆಯಬಾರದು ಎನ್ನುವ ದೃಷ್ಠಿಯಲ್ಲಿ ದ.ಕ ಜಿಲ್ಲಾಧಿಕಾರಿ ಭಕ್ತರು ಕುಮಾರಧಾರ ನದಿಯಲ್ಲಿ ಇಳಿದು ತೀರ್ಥ ಸ್ನಾನ ಮಾಡದಂತೆ ಆದೇಶ ಹೊರಡಿಸಿದ್ದರು . ಹೀಗಾಗಿ ಆರಂಭದಲ್ಲಿ ತಾತ್ಕಾಲಿಕವಾಗಿ ಡ್ರಮ್ಮಿನಲ್ಲಿ ನದಿ ನೀರನ್ನು ತುಂಬಿ ತೀರ್ಥ ಸ್ನಾನ ಮಾಡಲು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.ಇದೀಗ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ಶವರ್ ವ್ಯವಸ್ಥೆ ಮಾಡಲಾಗಿದೆ.
ದೇಗುಲದ ಎ.ಇ.ಓ ಯೇಸುರಾಜ್, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಉದಯ್ ಕುಮಾರ್ ಹಾಗೂ ಸಿಬಂಧಿ ಕುಮಾರಧಾರ ನದಿ ಸ್ನಾನಘಟ್ಟಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಈ ಬಗ್ಗೆ ಮೇಲಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.