Published
3 months agoon
By
Akkare News
ಕಳೆದ ಶುಕ್ರವಾರ ತಮ್ಮ ಕುಟುಂಬದ ತರವಾಡು ಮನೆ, ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದ ಸಂದರ್ಭದಲ್ಲಿ, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕಿಂದ ಜಾರಿ ರಸ್ತೆಗೆ ಬಿದ್ದು ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆ ಬಳಿಕ ಆಪರೇಶನ್ ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ತಡ ರಾತ್ರಿ ಇಹಲೋಕ ತ್ಯಜಿಸಿದರು ಎಂದು ತಿಳಿದುಬಂದಿದೆ. ಸುಳ್ಯದ ಬೀರಮಂಗಲ ನಿವಾಸಿ, ಬಂಟ್ವಾಳದ ಕಾಮಾಜೆ ಸರಕಾರಿ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಡಾ.ಅಚ್ಚುತ ಪೂಜಾರಿಯವರ ಪತ್ನಿಯಾಗಿದ್ದಾರೆ.