ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಆರೋಗ್ಯ

70 ವರ್ಷ ಮೇಲ್ಪಟ್ಟವರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ: ಕೇಂದ್ರ ಸರ್ಕಾರದ ಮಹತ್ವದ ಘೋಷಣೆ

Published

on

70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.

 

 

 

 

ಸಚಿವ ಸಂಪುಟ ಸಭೆಯ ನಂತರ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಸಾರ್ವತ್ರಿಕ ಆರೋಗ್ಯ ವ್ಯಾಪ್ತಿಯಾದ ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಒಳಗೊಳ್ಳಲು ಕೇಂದ್ರ ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಆಯುಷ್ಮಾನ್ ಭಾರತ್‌ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB PM-JAY) ಅಡಿಯಲ್ಲಿ 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೆ ಅವರ ಆದಾಯವನ್ನು ಲೆಕ್ಕಿಸದೆ 5 ಲಕ್ಷ ರೂ. ಆರೋಗ್ಯ ರಕ್ಷಣೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ.

ಇದೊಂದು ದೊಡ್ಡ ನಿರ್ಧಾರ. ಈ ನಿರ್ಧಾರದಲ್ಲಿ ಮಾನವೀಯ ಚಿಂತನೆ ಇದೆ. ಅವರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯ ಸಿಗಲಿದೆ ಮತ್ತು ಇದು ದೇಶದ ಸುಮಾರು 4.5 ಕೋಟಿ ಕುಟುಂಬಗಳನ್ನು ಒಳಗೊಳ್ಳುತ್ತದೆ. ಇದರಲ್ಲಿ ಸುಮಾರು 6 ಕೋಟಿ ಹಿರಿಯ ನಾಗರಿಕರು ಸೇರಿದ್ದಾರೆ.” ಎಂದು ಸಚಿವ ಅಶ್ವಿನ್ ವೈಷ್ಣವ್ ಹೇಳಿದ್ದಾರೆ.

ಸರ್ಕಾರದ ಉಚಿತ ಆರೋಗ್ಯ ವಿಮೆಯನ್ನು ಹೇಗೆ ಪಡೆಯುವುದು?:

– 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರು ಆರೋಗ್ಯ ರಕ್ಷಣೆಗಾಗಿ ಆಯುಷ್ಮಾನ್ ಭಾರತ್‌ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB PM-JAY) ಅಡಿಯಲ್ಲಿ ವಿಶಿಷ್ಟವಾದ ಕಾರ್ಡ್ ಅನ್ನು ಸ್ವೀಕರಿಸುತ್ತಾರೆ.

– ಈಗಾಗಲೇ AB PM-JAY ವ್ಯಾಪ್ತಿಗೆ ಒಳಪಡುವವರು ತಮ್ಮ ಕುಟುಂಬದ ಹಿರಿಯ ನಾಗರಿಕರಿಗೆ ವಾರ್ಷಿಕವಾಗಿ 5 ಲಕ್ಷ ರೂ. ಹೆಚ್ಚುವರಿ ಟಾಪ್ ಅಪ್ ಪಡೆಯುತ್ತಾರೆ.

– ಇತರ ಸಾರ್ವಜನಿಕ ಆರೋಗ್ಯ ವಿಮಾ ಯೋಜನೆಗಳಿಂದ ಈಗಾಗಲೇ ಪ್ರಯೋಜನ ಪಡೆಯುತ್ತಿರುವ ಹಿರಿಯ ನಾಗರಿಕರು ತಮ್ಮ ಪ್ರಸ್ತುತ ಯೋಜನೆಯನ್ನು ಮುಂದುವರಿಸಬಹುದು ಅಥವಾ AB PM-JAY ಅಡಿಯಲ್ಲಿ ವ್ಯಾಪ್ತಿಯನ್ನು ಆರಿಸಿಕೊಳ್ಳಬಹುದು.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version