Published
3 months agoon
By
Akkare Newsಕೋಲಾರ: ಜಾತಿ ನಿಂದನೆ ಆರೋಪ ಹಿನ್ನೆಲೆ ಬಿಜೆಪಿ ಶಾಸಕ ಮುನಿರತ್ನರನ್ನು ಬಂಧಿಸಲಾಗಿದೆ. ಕೋಲಾರದಿಂದ ಚಿತ್ತೂರಿಗೆ ತೆರಳುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಮುನಿರತ್ನ ವಿರುದ್ಧ ಎರಡು ಎಫ್.ಐ.ಆರ್. ದಾಖಲಾಗಿವೆ.
ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿರುವ ಆರೋಪದಲ್ಲಿ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ.
ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದ ಮುನಿರತ್ನ ಅವರನ್ನು ಮೊಬೈಲ್ ಫೋನ್ ಲೊಕೇಷನ್ ಆಧರಿಸಿ ಪತ್ತೆ ಮಾಡಲಾಗಿದೆ. ನಂತರ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಕೇಸ್ ದಾಖಲಾದಾಗಿನಿಂದ ಮುನಿರತ್ನ ಮೇಲೆ ಪೊಲೀಸರು ನಿಗಾ ವಹಿಸಿದ್ದರು.
ಸದ್ಯ ಮುನಿರತ್ನರನ್ನು ವಶಕ್ಕೆ ಪಡೆದಿರುವ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.