Published
3 months agoon
By
Akkare Newsಪುತ್ತೂರು: ಪ್ರಜಾಪ್ರಭುತ್ವಕ್ಕಾಗಿ ಕರ್ನಾಟಕದಲ್ಲಿ ಮಾನವ ಸರಪಳಿ (ಸಮಾನತೆ, ಭ್ರಾತೃತ್ವ ಮತ್ತು ಸ್ವಾತಂತ್ರ್ಯ) ಎಂಬ ಧೈಯವಾಕ್ಯದೊಂದಿಗೆ ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಅಭೂತಪೂರ್ವ ಯಶಸ್ವಿಕಂಡಿದೆ. ಶಾಸಕ ಅಶೋಕ್ ಕುಮಾರ್ ರೈ ಅವರು ಕಬಕದಲ್ಲಿ ಮಾನವಸರಪಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
8ನೇ ತರಗತಿಯ ಮೇಲ್ಪಟ್ಟು ವಿದ್ಯಾರ್ಥಿಗಳು ಸಹಿತ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ವಿಧಾನಪರಿಷತ್ ಸದಸ್ಯ ಐವನ್ ಡಿ ಸೋಜ ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಉಪಾಧ್ಯಕ್ಷ ಬಾಲಚಂದ್ರ, ಪುಡಾ ಸದಸ್ಯ ಲ್ಯಾನ್ಸಿಮಸ್ಕರೇನಸ್, ಗ್ಯಾರಂಟಿ ಯೋಜನೆ ಪ್ರಾಧಿಕಾರ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ, ಗ್ರಾ.ಪಂ ಅಧ್ಯಕ್ಷೆ ಸುಶಿಲ, ಸಹಾಯ ಕಮೀಷನರ್ ಜುಬಿನ್ ಮೊಹಪಾತ್ರ, ತಹಶೀಲ್ದಾರ್ ಪುರಂದರ ಹೆಗ್ಡೆ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್, ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಕೃಷ್ಣ, ಸಹಿತ ಹಲವಾರು ಮಂದಿ ಕಬಕದಲ್ಲಿ ಉಪಸ್ಥಿತರಿದ್ದರು.
ಬಳಿಕ ತೆರೆದ ವಾಹನದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಸಹಾಯಕ ಕಮೀಷನರ್ ಜುಬಿನ್ ಮೊಹಪಾತ್ರ ದಾರಿಯುದ್ದಕ್ಕೂ ಮಾನವ ಸರಪಳಿ ಮಾಡಿದ ಮಕ್ಕಳು ಸಾರ್ವಜನಿಕರಿಗೆ ಶುಭಹಾರೈಸಿದರು. ಸಂಪ್ಯದಲ್ಲಿ ಬೈಕ್ ರ್ಯಾಲಿಗೆ ಚಾಲನೆ ನೀಡಲಾಯಿತು.