Published
3 months agoon
By
Akkare Newsನವದೆಹಲಿ : ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಣೆ ಬೆನ್ನಲ್ಲೇ ದೆಹಲಿ ನೂತನ ಮುಖ್ಯಮಂತ್ರಿ ಅಗಿ ಸಚಿವೆ ಅತಿಶಿ ಆಯ್ಕೆಯಾಗಿದ್ದಾರೆ.
ಬೆಳಗ್ಗೆಯಿಂದ ಕೇಜ್ರಿವಾಲ್ ನಿವಾಸದಲ್ಲಿ ಸಭೆ ನಡೆದಿತ್ತು, ಈ ಅವಧಿಯಲ್ಲಿ ಅನೇಕ ಹೆಸರುಗಳು ಕೇಳಿಬಂದಿದ್ದವು. ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ ಅತಿಶಿ ಅವರ ಹೆಸರನ್ನು ಮುಂದಿಡಲಾಗಿತ್ತು. ಆದರೆ ಸಭೆಯಲ್ಲಿ ಅತಿಶಿ ಅವರ ಹೆಸರನ್ನು ಕೇಜ್ರಿವಾಲ್ ಘೋಷಿಸಿದರು ಮತ್ತು ಇತರ ನಾಯಕರು ಅವರನ್ನು ಬೆಂಬಲಿಸಿದರು. ದೆಹಲಿಯ ಮದ್ಯ ನೀತಿಯ ಪ್ರಕರಣದಲ್ಲಿ ಎಎಪಿ ನಾಯಕರು ಜೈಲಿಗೆ ಹೋಗಬೇಕಾದಾಗ, ಅತಿಶಿ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಂಡರು. ಅವರು ಪಕ್ಷಕ್ಕೆ ಅಪಾರ ನಿಷ್ಠೆ ತೋರಿದ್ದಾರೆ.
ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ತಿಹಾರ್ ಜೈಲಿನಲ್ಲಿದ್ದರು. ಅವರನ್ನು ಸೆಪ್ಟೆಂಬರ್ 13 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಇದಾದ ಬಳಿಕ ಸೆ.15ರಂದು ಎರಡು ದಿನಗಳಲ್ಲಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಸಾರ್ವಜನಿಕರು ತೀರ್ಪು ನೀಡುವವರೆಗೂ ಸಿಎಂ ಸ್ಥಾನದಲ್ಲಿ ಕೂರುವುದಿಲ್ಲ ಎಂದು ಹೇಳಿದ್ದರು.