ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಪ್ರತಿಭಟನಾ ನಿರತ ವೈದ್ಯರ ಬೇಡಿಕೆಗೆ ಮಣಿದ ಮಮತಾ ಸರ್ಕಾರ!

Published

on

ಆರ್‌ಜಿ ಕರ್ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಅವರನ್ನು ಬದಲಿಸಿ ಹಿರಿಯ ಐಪಿಎಸ್ ಅಧಿಕಾರಿ ಮನೋಜ್ ಕುಮಾರ್ ವರ್ಮಾ ಅವರನ್ನು ನೇಮಿಸಿದೆ. ಈ ಮೂಲಕ ಕೊಲ್ಕತ್ತಾ ಅತ್ಯಾವಾರ ಮತ್ತು ಹತ್ಯೆ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರಿಗೆ ಜಯಸಿಕ್ಕಿದೆ.

 

 

ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ನಿರ್ವಹಣೆಯ ಬಗ್ಗೆ ತೀವ್ರ ಟೀಕೆಗೆ ಒಳಗಾದ ಗೋಯಲ್ ಅವರನ್ನು ಪದಚ್ಯುತಗೊಳಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ರಾತ್ರಿ ಧರಣಿ ನಿರತ ವೈದ್ಯರೊಂದಿಗೆ ಭೇಟಿಯಾದ ನಂತರ ಪ್ರಕಟಿಸಿದರು.

 

 

 

1994 ರ ಬ್ಯಾಚ್‌ನ ಗೋಯಲ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸ್‌ನ ವಿಶೇಷ ಕಾರ್ಯಪಡೆಯ (ಎಸ್‌ಟಿಎಫ್) ಎಡಿಜಿ ಮತ್ತು ಐಜಿಪಿಯನ್ನಾಗಿ ಮಾಡಲಾಯಿತು. 1998 ರ ಬ್ಯಾಚ್‌ನ ಅಧಿಕಾರಿ ವರ್ಮಾ ಅವರು ತಮ್ಮ ಕೊನೆಯ ನಿಯೋಜನೆಯಲ್ಲಿ ಎಡಿಜಿ ಮತ್ತು ಐಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಆಗಿದ್ದರು. 1995 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಜಾವೇದ್ ಶಮೀಮ್ ಅವರನ್ನು ಎಡಿಜಿ ಮತ್ತು ಐಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸ್ಥಾನಕ್ಕೆ ನೇಮಿಸಲಾಗಿದೆ.

ಅಲ್ಲದೆ, ಸರ್ಕಾರವು ಡಾ.ಕೌಸ್ತವ್ ನಾಯಕ್ ಮತ್ತು ಡಾ.ದೇಬಾಶಿಶ್ ಹಾಲ್ಡರ್ ಅವರನ್ನು ಕ್ರಮವಾಗಿ ವೈದ್ಯಕೀಯ ಶಿಕ್ಷಣದ ನಿರ್ದೇಶಕ (DME) ಮತ್ತು ಆರೋಗ್ಯ ಸೇವೆಗಳ ನಿರ್ದೇಶಕ (DHS) ಸ್ಥಾನದಿಂದ ತೆಗೆದುಹಾಕಿದೆ ಎಂದು ಆರೋಗ್ಯ ಇಲಾಖೆ ಆದೇಶ ತಿಳಿಸಿದೆ. ಡಾ ಸ್ವಪನ್ ಸೊರೆನ್ ಅವರನ್ನು ಆರೋಗ್ಯ ಸೇವೆಗಳ ಹೊಸ ಪ್ರಭಾರಿ ನಿರ್ದೇಶಕರಾಗಿ ಮತ್ತು ವೈದ್ಯಕೀಯ ಶಿಕ್ಷಣದ ವಿಶೇಷ ಕರ್ತವ್ಯದ ಅಧಿಕಾರಿ ಡಾ ಸುಪರ್ಣಾ ದತ್ತಾ ಅವರನ್ನು ನೇಮಿಸಲಾಗಿದೆ ಎಂದು ಅದು ಹೇಳಿದೆ.

 

ನಾಯಕ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ನಿರ್ದೇಶಕರನ್ನಾಗಿ ನೇಮಿಸಲಾಯಿತು ಮತ್ತು ಹಾಲ್ದರ್ ಅವರನ್ನು ಸ್ವಾಸ್ಥ್ಯ ಭವನದಲ್ಲಿ ಸಾರ್ವಜನಿಕ ಆರೋಗ್ಯದ ವಿಶೇಷ ಕರ್ತವ್ಯದ ಅಧಿಕಾರಿಯಾಗಿ ನೇಮಿಸಲಾಯಿತು.

 

ಕಳೆದ 39 ದಿನಗಳಿಂದ ಆರ್‌ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಪ್ರಶಿಕ್ಷಣಾರ್ಥಿ ವೈದ್ಯೆಯ ಅತ್ಯಾಚಾರ ಕೊಲೆಯನ್ನು ಪ್ರತಿಭಟಿಸಿ ಕಿರಿಯ ವೈದ್ಯರು ‘ಕೆಲಸ ನಿಲ್ಲಿಸಿ’ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಆರೋಗ್ಯ ಕ್ಷೇತ್ರದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಆರೋಗ್ಯ ಕಾರ್ಯದರ್ಶಿ, ಆರೋಗ್ಯ ಸೇವೆಗಳ ನಿರ್ದೇಶಕರು, ವೈದ್ಯಕೀಯ ಶಿಕ್ಷಣ ನಿರ್ದೇಶಕರು ಮತ್ತು ನಿರ್ದೇಶಕರನ್ನು ವಜಾಗೊಳಿಸುವಂತೆ ವೈದ್ಯರು ಒತ್ತಾಯಿಸಿದ್ದರು.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version