ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕ್ರೀಡೆ

ಮಕ್ಕಳೊಂದಿಗೆ ಮಗುವಾಗಿ ಕೆಸರಿನಲ್ಲಾಡಿದ ಮಗು ಮನದ ಜಿಲ್ಲಾಧಿಕಾರಿ..

Published

on

ಬಂಟ್ವಾಳ : ರೈತ ದೇಶದ ಬೆನ್ನೆಲುಬು ಸಂತೋಷದೊಂದಿದ್ದರೆ ಇಡೀ ಜಗತ್ತೇ ಸಂತಸ ಪಡುವುದು, ಪ್ರತಿಯೊಬ್ಬರ ಆಹಾರವನ್ನು ಪೂರೈಸಿ ಎಲ್ಲರ ಹಸಿವು ನೀಗಿಸುವ ರೈತ ಯಾವಾಗಲೂ ಸಂತೋಷವಾಗಿರಬೇಕು ಜಿಲ್ಲೆಯ ಹವಾಮಾನದ ಎಡರು ತೊಡರುಗಳನ್ನು ದಾಟಿ ಆತನು ಬದುಕಬೇಕಾಗುತ್ತದೆ.ಈ ನೆಲದ ಸಂಸ್ಕೃತಿಯು ಬೆಳೆದು ಬಂದಿರುವುದು ಗದ್ದೆಗಳಿಂದ. ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹೇಳಿದರು.

ಅವರು ರವಿವಾರ ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನವ ಭಾರತ್ ಯುವಕ ಸಂಘ ( ರಿ ) ಅನಂತಾಡಿ ವತಿಯಿಂದ ಪಡಿಪಿರೆ ಗದ್ದೆಯಲ್ಲಿ ಜರಗಿದ 6 ನೇ ವರ್ಷದ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಧಿಕಾರದ ಯಾವುದೇ ಬಿಗುಮಾನವನ್ನು ಇಡದೆ ಮಕ್ಕಳ ಜೊತೆ ಮಗುವಾಗಿ ಬೆರೆತು ಕೆಸರಿನಲ್ಲಿ ಸಂಭ್ರಮಿಸಿದರು.

 

ಮಳೆಗಾಗಿ ರಜೆ ನೀಡುವ ಬಗ್ಗೆ ಸ್ನೇಹಿತನಂತೆ ಮಕ್ಕಳ ಜೊತೆ ವರ್ತಿಸಿದ್ದ ಜಿಲ್ಲಾಧಿಕಾರಿ ಕೆಸರಿನಲ್ಲೂ ಮಕ್ಕಳ ಜೊತೆಗೂಡಿ ಸಂತಸಪಟ್ಟ ರೀತಿ ಕಂಡು ಊರೇ ಸಂಭ್ರಮಿಸಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಅನೀಶ್ ಅಶ್ವತ್ತಾಡಿ ವಹಿಸಿದ್ದರು.

 

ಕಾರ್ಯಕ್ರಮದ ಧ್ವಜಾರೋಹಣವನ್ನು ಡಾಕ್ಟರ್ ರೂಪಲತಾ ಕೊಂಗಲಾಯಿ ನೆರವೇರಿಸಿ , ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಮಾಣಿ ವಲಯ ಅಧ್ಯಕ್ಷರಾದ ರಾಮ್ ಕಿಶಾನ್ ರೈ ಮಾಡಿದರು.ಕ್ರೀಡಾಕೂಟದ ಕೆಸರುಗದ್ದೆಯ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರ ಸಂಘದ ಮಾಜಿ ಅಧ್ಯಕ್ಷರಾದ ಸಂಜೀವ ಪೂಜಾರಿ ಹಾಗೂ ವಿಠಲ ಕೋಟ್ಯಾನ್ ಪೊಯ್ಯೇ ನೆರವೇರಿಸಿದರು.

 

ವೇದಿಕೆಯಲ್ಲಿ ಮಾಣಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ನಿವೃತ್ತ ಶಿಕ್ಷಕ ರಾಮಣ್ಣ ಗೌಡ ಕೋಂಗಲಾಯಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಾರ್ಶ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ನೆರಳಕಟ್ಟೆ, ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವಿನ ರಾಧಾಕೃಷ್ಣಮೂಲ್ಯ, ಮಲ್ಲರಾಯ ದೈವ ಪರಿಚರಕರು ಗಳಾದ ರಾಮಣ್ಣ ಗೌಡ, ಬಾಲಪ್ಪ ಮಡಿವಾಳ, ಲಕ್ಷ್ಮಣ ಪೂಜಾರಿ ಬಾಕಿಲ, ಪದ್ಮನಾಭ ಪೂಜಾರಿ ಈಡೆಮುಂಡೆವು ಮೊದಲಾದವರು ಉಪಸ್ಥಿತರಿದ್ದರು.

 

ಕೆಸರು ಗದ್ದೆಯಲ್ಲಿ ಮಕ್ಕಳಿಗೆ,ಮಹಿಳೆಯರಿಗೆ, ಪುರುಷರಿಗೆ, ವಿವಿಧ ಕ್ರೀಡಾಕೂಟಗಳನ್ನು ನಡೆಸಲಾಯಿತು.ಹಾಗೂ ಈ ಸಂದರ್ಭದಲ್ಲಿ ನಮ್ಮ ತುಳುವ ಸಂಸ್ಕೃತಿಯ ಚಾಪೆ ನೆಯುದು , ಬುಟ್ಟಿ ನೆಯ್ಯುವುದು, ಮುಟ್ಟಾಲೆ ಕಟ್ಟುವುದು, ತೆಂಗಿನಗರಿ ನೆಯ್ಯುವುದು, ಅಕ್ಕಿ ಮುಡಿ ಕಟ್ಟುವ ಪ್ರಾತ್ಯಕ್ಷತೆ ನಡೆಸಲಾಯಿತು.

ಯತೀಶ್ ಪೂಂಜಾವ್ ಸ್ವಾಗತಿಸಿ, ವೆಂಕಟೇಶ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version