Published
3 months agoon
By
Akkare Newsಬೆಂಗಳೂರು, ಸೆ.23: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಲು ತಯಾರಿ ನಡೆಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 85 ಲಕ್ಷ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದರು. ಆ ಹಣದ ಮೂಲ ಏನೆಂದು ತಿಳಿಯುವ ಉದ್ದೇಶದಿಂದ ಐಟಿ ಅಧಿಕಾರಿಗಳು ಆರೋಪಿ ದರ್ಶನ್ ಅವರನ್ನು ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಇದೀಗ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮನವಿಗೆ ಕೋರ್ಟ್ ಒಪ್ಪಿಗೆ ನೀಡಿದೆ.
.ಕೋರ್ಟ್ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಾಳೆ ದರ್ಶನ್ ಅವರನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇನ್ನು ಕೋರ್ಟ್ ಒಪ್ಪಿಗೆ ನೀಡಿದ ಬೆನ್ನಲ್ಲೇ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಗೆ ನೋಟಿಸ್ ಜಾರಿ ಮಾಡಲಾಗಿದ್ದು, ಇಂದು ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ಅಧಿಕಾರಿಗಳು ಭೇಟಿ ಮಾಡಿ ನೋಟಿಸ್ ನೀಡಿದ್ದಾರೆ.