Published
3 months agoon
By
Akkare Newsಉಪ್ಪಿನಂಗಡಿ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾ.ಹೆ. 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಸಂಭವಿಸಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಗುಂಡ್ಯ ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿದೆ..
ಟ್ಯಾಂಕರ್ ಹಾಗೂ ಬಸ್ ಚಾಲಕ ಸಹಿತ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಚಾಲಕ ಹಾಗೂ ನಿರ್ವಾಹಕನನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸಣ್ಣಪುಟ್ಟ ಗಾಯಗೊಂಡ ಹಲವು ಪ್ರಯಾಣಿಕರು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.