Published
3 months agoon
By
Akkare Newsಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್‌ನನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದ್ದು, ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಾರೀ ಹಿನ್ನೆಡೆಯಾಗಿದೆ. ಇದರಿಂದ ಬುಧವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿರುವ ಮುಖ್ಯಮಂತ್ರಿ ಸಭೆಯಲ್ಲಿ ತೆಗೆದುಕೊಳ್ಳಬಹುದಾದ ಕ್ರಮದ ಕುರಿತು ಚರ್ಚಿಸುವ ಸಾಧ್ಯತೆ ಇದೆ.
ಗುರುವಾರ ಮಧ್ಯಾಹ್ನ 12.30 ಕ್ಕೆ ವಿಧಾನಸೌಧದಲ್ಲಿ ಸಚಿವ ಸಂಪುಟ ನಡೆಯಲಿದೆ. ರಾಜ್ಯಪಾಲರು ಬೇರೆ ಬೇರೆ ಪ್ರಕರಣದಲ್ಲಿ ವರದಿ ಕೇಳಿ ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಈ ಪತ್ರಗಳಿಗೆ ಉತ್ತರ ನೀಡುವ ಕುರಿತು ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇತ್ತ ಹೈಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ಸಿದ್ದರಾಮಯ್ಯ ಅವರ ನಿವಾಸಕ್ಕೆ ಕಾನೂನು ಸಚಿವ ಹೆಚ್ ಕೆ ಪಾಟೀಲ್, ಸಚಿವರಾದ ಶಿವರಾಜ್ ತಂಗಡಗಿ, ಕೃಷ್ಣಭೈರೇಗೌಡ, ಡಿಸಿಎಂ ಡಿಕೆಶಿ ತೆರಳಿದ್ದಾರೆ. ಇದರ ನಡುವೆ ಹೈಕೋರ್ಟ್ ತೀರ್ಪು ಬರುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರ ರಣದೀಪ್ ಸಿಂಗ್ ಸುರ್ಜೆವಾಲಾ ರಾಜ್ಯಕ್ಕೆ ಬರುತ್ತಿದ್ದಾರೆ.
ಬುಧವಾರ (ನಾಳೆ ಸೆ.25) ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕೇರಳಕ್ಕೆ ಪ್ರವಾಸ ತೆರಳಲಿದ್ದು, ಮಲಪ್ಪುರಂ ಜಿಲ್ಲೆಯಲ್ಲಿ ನಡೆಯುವ ಆರ್ಯಧನ್ ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.