Published
3 months agoon
By
Akkare Newsಮಂಗಳೂರು : ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ.
ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ ಮತ್ತು ಪ್ರಯಾಣ ದರದ ವಿವರ
ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 8ಗಂಟೆಗೆ ಹೊರಟು, ಶ್ರೀ ಮಂಗಳಾದೇವಿ ದೇವಸ್ಥಾನ – ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ – ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ – ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ – (ಮಧ್ಯಾಹ್ನದ ಊಟ) – ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಹಾಗೂ ಬೀಚ್ – ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ – ಶ್ರೀ ಉರ್ವ ಮಾರಿಯಮ್ಮ ದೇವಸ್ಥಾನ (ಸಂಜೆ ಉಪಹಾರ) – ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ, ನವದುರ್ಗಾ ದರ್ಶನ ರಾತ್ರಿ 8 ಗಂಟೆಗೆ ಮಂಗಳೂರು ಬಸ್ ನಿಲ್ದಾಣಕ್ಕೆ ಹಿಂದಿರುಗಲಾಗುತ್ತದೆ. – ಒಟ್ಟು ಪ್ರಯಾಣದರ (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ ರೂ.400/- ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) ರೂ.300/- ಪ್ರಯಾಣ ದರ ನಿಗದಿಪಡಿಸಲಾಗಿದೆ.
ಮಡಿಕೇರಿ ಪ್ಯಾಕೇಜ್ ಪ್ರವಾಸ :
ಮಂಗಳೂರಿನಿಂದ ಬೆಳಿಗ್ಗೆ 7 ಗಂಟೆಗೆ ಹೊರಟು -ಮಡಿಕೇರಿ-ರಾಜಾಸೀಟ್-ಅಬ್ಬಿಫಾಲ್ಸ್-ನಿಸರ್ಗಧಾಮ- ಗೋಲ್ಡನ್ ಟೆಂಪಲ್ ಪ್ರವಾಸ ಕೈಗೊಂಡು ರಾತ್ರಿ 9ಗಂಟೆಗೆ ಮಂಗಳೂರು ಬಸ್ ನಿಲ್ದಾಣಕ್ಕೆ ಹಿಂದಿರುಗಲಾಗುತ್ತದೆ. (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ ರೂ.500/- ಮಕ್ಕಳಿಗೆ (6ವರ್ಷದಿಂದ 12 ವರ್ಷದವರಿಗೆ) ರೂ.400/- ನಿಗದಿಪಡಿಸಲಾಗಿದೆ.
ಮಂಗಳೂರು-ಕೊಲ್ಲೂರು ಪ್ಯಾಕೇಜ್ ಪ್ರವಾಸ :
ಮಂಗಳೂರು ಬಸ್ ನಿಲ್ದಾಣದಿಂದ ಬೆಳಿಗ್ಗೆ 8 ಗಂಟೆಗೆ ಹೊರಟು – ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ – ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ) – ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ – ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಪ್ರವಾಸ ಕೈಗೊಂಡು ರಾತ್ರಿ 7 ಗಂಟೆಗೆ ಮಂಗಳೂರು ಬಸ್ ನಿಲ್ದಾಣಕ್ಕೆ ಹಿಂದಿರುಗಲಾಗುತ್ತದೆ. (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ ರೂ.500/- ಮಕ್ಕಳಿಗೆ (6ವರ್ಷದಿಂದ 12 ವರ್ಷದವರಿಗೆ) ರೂ.400/- ದರ ನಿಗದಿಪಡಿಸಲಾಗಿದೆ.
ಮಂಗಳೂರು-ಮುರುಡೇಶ್ವರ ಪ್ಯಾಕೇಜ್
ಮಂಗಳೂರು ಬಸ್ ನಿಲ್ದಾಣ ದಿಂದ ಬೆಳಿಗ್ಗೆ 7 ಗಂಟೆಗೆ ಹೊರಟು – ಮುರುಡೇಶ್ವರ ದೇವಸ್ಥಾನ – ಚಂಡಿಕಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕುಂಭಾಶಿ – ಆನೆಗುಡ್ಡೆ ಗಣಪತಿ ದೇವಸ್ಥಾನ ಕುಂಭಾಶಿ – ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಪ್ರವಾಸ ಕೈಗೊಂಡು ರಾತ್ರಿ 7 ಗಂಟೆಗೆ ಮಂಗಳೂರು ಬಸ್ ನಿಲ್ದಾಣಕ್ಕೆ ಹಿಂದಿರುಗಲಾಗುತ್ತದೆ. (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ ರೂ.550/- ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) ರೂ.450/- ದರ ನಿಗದಿಪಡಿಸಲಾಗಿದೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅನ್‌ಲೈನ್ ಮುಂಗಡ ಬುಕ್ಕಿಂಗ್ ಸೌಲಭ್ಯ : www.ksrtc.in
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಪೀಠವು ಮಂಗಳವಾರ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರ ನಿರ್ಧಾರವನ್ನು ಎತ್ತಿಹಿಡಿದಿದೆ. ಈ ವಿಚಾರದಲ್ಲಿ ಸಿದ್ದರಾಮಯ್ಯ ಮಧ್ಯಂತರ ಪರಿಹಾರ ಕೋರಿದ್ದಲ್ಲದೆ, ರಾಜ್ಯಪಾಲರ ಆದೇಶವನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದರು.