ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಆರ್ ಸಿ ನಾರಾಯಣ ರೆಂಜ

Published

on

ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿರುವುದು ಸ್ವಾಗತಾರ್ಹ

 

ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್‌ ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ.
ಹಿಂದುಳಿದ ವರ್ಗದ ಹೆಸರು ಹೇಳಿಕೊಂಡು ರಕ್ಷಣೆ ಪಡೆಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರು ಈ ಪ್ರಕರಣದಿಂದ ಹಿಂದುಳಿದ ವರ್ಗ ತಲೆತಗ್ಗಿಸುವಂತಾಗಿದೆ.

 

 

 

ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ ಒತ್ತಾಯಿಸಿದ್ದಾರೆ.

 

 

ಇತ್ತೀಚೆಗೆ, ಕಂಗನಾ ರಣಾವತ್ ಅವರು ರೈತ ಪ್ರತಿಭಟನೆಗಳಿಂದ “ಭಾರತದಲ್ಲಿ ಬಾಂಗ್ಲಾದೇಶದಂತಹ ಪರಿಸ್ಥಿತಿ” ನಿರ್ಮಾಣವಾಗುತ್ತಿತ್ತು ಎಂದು ಹೇಳಿದ್ದರು ಮತ್ತು ಆಂದೋಲನದ ಸ್ಥಳಗಳಲ್ಲಿ ಮೃತ ದೇಹಗಳು ನೇಣು ಬಿಗಿದುಕೊಂಡಿತ್ತು ಹಾಗೂ ಅತ್ಯಾಚಾರಗಳು ನಡೆಯುತ್ತಿತ್ತು ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ವ್ಯಾಪಕ ಪ್ರತಿಭಟನೆಗೆ ವ್ಯಕ್ತವಾಗಿದ್ದು, ಬಿಜೆಪಿ ಅವರ ಹೇಳಿಕೆಯಿಂದ ಅಂತರ ಕಾಪಾಡಿಕೊಂಡಿತ್ತು ಮತ್ತು ಅಂತಹ ಹೇಳಿಕೆಗಳಿಂದ ಅವರನ್ನು ದೂರವಿರಲು ಒತ್ತಾಯಿಸಿತ್ತು.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version