Published
3 months agoon
By
Akkare Newsಬ್ಲಾಕ್ ಅಧ್ಯಕ್ಷರುಗಳ ನೇಮಕ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು,ಉಪ್ಪಿನಂಗಡಿ ಮತ್ತು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ.
ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿ ಕೃಷ್ಣಪ್ರಸಾದ್ ಆಳ್ವ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ ಯು ಟಿ ತೌಸೀಫ್ ಹಾಗೂ ವಿಟ್ಲ ಬ್ಲಾಕ್ ಅಧ್ಯಕ್ಷರಾಗಿ ಪದ್ಮನಾಭ ಪೂಜಾರಿ ಅವರನ್ನು ನೇಮಕ ಗೊಳಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಆದೇಶಿಸಿದ್ದಾರೆ. ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಶಿಪಾರಸ್ಸಿನಂತೆ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಸೂಚನೆ ಮೇರೆಗೆ ಈ ನೇಮಕಾತಿ ನಡೆದಿರುತ್ತದೆ.