Published
3 months agoon
By
Akkare Newsಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಜೀರ್ಣೋದ್ದಾರ ಕಾರ್ಯಗಳು ನಡೆಯುತ್ತಿದ್ದು ದೈವಸ್ಥಾನದ ಅಭಿವೃದ್ದಿ ಕಾರ್ಯಕ್ಕೆ ಅನುದಾನ ನೀಡುವಂತೆ ಶಾಸಕ ಅಶೋಕ್ ರೈಯವರು ಮುಜರಾಯಿ ಖಾತೆ ಸಚಿವರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ಆರ್ಲಪದವು ಕಿನ್ನಿಮಾಣಿ ಪೂಮಾಣಿ ದೈವಸ್ಥಾನ ಅತ್ಯಂತ ಪುರಾತನ ದೈವಸ್ಥಾನವಾಗಿದೆ. ಇದರ ಜೀರ್ಣೋದ್ದಾರ ಕಾರ್ಯಗಳು ಈಗಾಗಲೇ ಪ್ರಾರಂಭಗೊಂಡಿದ್ದು ನಿತ್ಯ ಇಲ್ಲಿಗೆ ನೂರಾರು ಭಕ್ತರು ಆಗಮಿಸುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ 15 ಲಕ್ಷ ಅನುದಾನ ನೀಡುವಂತೆ ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾ ರೆಡ್ಡಿಯವರಿಗೆ ಮನವಿ ಸಲ್ಲಿಸಿದ್ದಾರೆ.
ತಡೆಗೋಡೆ ನಿರ್ಮಾಣಕ್ಕೆ ಮನವಿ
ಇದೇ ಕ್ಷೇತ್ರದ ಪಕ್ಕದಲ್ಲಿ ಹಳ್ಳವಿದ್ದು ಇಲ್ಲಿ ತಡೆಗೋಡೆ ನಿರ್ಮಾಣದ ಅಗತ್ಯವಿದ್ದು ಇದಕ್ಕಾಗಿ 40 ಲಕ್ಷ ಅನುದಾನ ನೀಡುವಂತೆ ಸಣ್ಣ ನೀರಾವರಿ ಖಾತೆ ಸಚಿವರಾದ ಬೋಸರಾಜ್ ಅವರಿಗೆ ಶಾಸಕರು ಮನವಿ ಸಲ್ಲಿಸಿದರು.