Published
3 months agoon
By
Akkare Newsಉಡುಪಿ: ವಿಧಾನ ಪರಿಷತ್ ದ.ಕ. ಸ್ಥಳೀಯ ಪ್ರಾಧಿಕಾರ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಸರತ್ತುಗಳು ನಡೆಯುತ್ತಿದ್ದು, ಕಾಂಗ್ರೆಸ್‌ನಿಂದ ಮೂವರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಈ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೇಟಿಗಾಗಿ ಉದ್ಯಮಿ ಹರಿಪ್ರಸಾದ್ ರೈ ಈಗಾಗಲೇ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ಇದರೊಂದಿಗೆ ಅವರು ಕೆಪಿಸಿಸಿ ಕಟ್ಟಡ ನಿಧಿಗೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಅಲ್ಲದೆ ಮಾಜಿ ಜಿಪಂ ಅಧ್ಯಕ್ಷರಾದ ರಾಜು ಪೂಜಾರಿ, ಭುಜಂಗ ಶೆಟ್ಟಿ, ಕಾಂಗ್ರೆಸ್ ಮುಖಂಡ ಡಿ.ಆರ್.ರಾಜು ಅವರು ಕೂಡ ಆಕಾಂಕ್ಷಿಗಳಾಗಿದ್ದಾರೆ.
ಇಂದು ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆದಿದ್ದು, ಇಲ್ಲಿ ರಾಜು ಪೂಜಾರಿ, ಡಿ.ಆರ್.ರಾಜು ಹಾಗೂ ಹರಿಪ್ರಸಾದ್ ರೈ ಅವರ ಹೆಸರನ್ನು ಅಂತಿಮಗೊಳಿಸ ಲಾಗಿದೆ ಎಂದು ತಿಳಿದುಬಂದಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಮತ ಗಳಲ್ಲಿ ಬಿಲ್ಲವ ಮತಗಳ ಸಂಖ್ಯೆ ಜಾಸ್ತಿ ಇದ್ದು, ಹಾಗಾಗಿ ಬಿಲ್ಲವ ಸಮುದಾಯ ದವರಿಗೆಯೇ ಟಿಕೆಟ್ ನೀಡಬೇಕೆಂಬ ಕೂಗು ಕೇಳಿಬರುತ್ತಿವೆ