Published
3 months agoon
By
Akkare Newsಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ 8 ರಿಂದ 10 ದಿನಗಳಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ತನ್ನ ಸೀಟು ಹಂಚಿಕೆ ಮಾತುಕತೆಯನ್ನು ಮುಕ್ತಾಯಗೊಳಿಸಲಿದೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಭಾನುವಾರ ಹೇಳಿದ್ದಾರೆ.
“ಯಾವುದೇ ಬೆಲೆ ತೆತ್ತಾದರೂ ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪ್ರತಿಪಕ್ಷಗಳ ಮೈತ್ರಿಯು ಶ್ರಮಿಸಬೇಕಾಗಿದೆ. ಎಂದು ಪ್ರತಿಪಾದಿಸಿದರು. ತಮ್ಮ ಪಕ್ಷ ತೊರೆದವರನ್ನು ಗುರಿಯಾಗಿಸಿದ ಪವಾರ್, “ಅವರಲ್ಲಿ ಬೆರಳೆಣಿಕೆಯಷ್ಟು ಮಂದಿಯೂ ರಾಜ್ಯ ಚುನಾವಣೆಯಲ್ಲಿ ಗೆಲ್ಲುವುದಿಲ್ಲ” ಎಂದು ಭವಿಷ್ಯ ನುಡಿದಿದ್ದಾರೆ.
288 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ನವೆಂಬರ್ ಮಧ್ಯದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥರು ಪುಣೆಯ ಬಾರಾಮತಿ ಪಟ್ಟಣದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಹೇಳಿದರು.
ಅಭ್ಯರ್ಥಿಗಳ ಆಯ್ಕೆಗೆ ಗೆಲುವು ಮಾತ್ರ ಅರ್ಹತೆಯಾಗಿದೆ. ಸಮ್ಮಿಶ್ರದಲ್ಲಿ ಹೊಂದಾಣಿಕೆಗಳು ಮತ್ತು ಹೊಂದಿಕೊಳ್ಳುವ ವಿಧಾನವು ಅತ್ಯಗತ್ಯವಾಗಿರುತ್ತದೆ ಎಂದು ಮಾಜಿ ಕೇಂದ್ರ ಸಚಿವರು ಹೇಳಿದರು.
ಎಂವಿಎ ಮೈತ್ರಗಕೂಟವು ಎನ್‌ಸಿಪಿ (ಎಸ್‌ಪಿ), ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಅನ್ನು ಒಳಗೊಂಡಿದೆ.
“ನೀವು ಎಲ್ಲ ಸ್ಥಾನಗಳಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ, ಇತರ ಇಬ್ಬರು ಪಾಲುದಾರರಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಅವಕಾಶ ನೀಡಬೇಕು ಮತ್ತು ನೀವು ಅವರಿಗಾಗಿಯೂ ಕೆಲಸ ಮಾಡಬೇಕು. ಯಾವುದೇ ಬೆಲೆ ತೆತ್ತಾದರೂ ನಾವು ನಮ್ಮದೇ ಸರ್ಕಾರವನ್ನು ಪಡೆಯಬೇಕು” ಎಂದು ಪವಾರ್ ಪ್ರತಿಪಾದಿಸಿದರು.
ಮೂರು ಎಂವಿಎ ಮಿತ್ರಪಕ್ಷಗಳು ನಿರ್ದಿಷ್ಟ ಸ್ಥಾನಕ್ಕಾಗಿ “ಮೂಲ ಆಕಾಂಕ್ಷಿ” ಕುರಿತು ಪಕ್ಷದ ಕಾರ್ಯಕರ್ತರ ಅಭಿಪ್ರಾಯಗಳನ್ನು ಪಡೆಯಲಿವೆ. ಪ್ರತಿ ತಾಲೂಕಿನಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ತಿಳಿಸಿದರು.
ರಾಜಕೀಯ ಪಕ್ಷದ ನಾಯಕರು ತಮ್ಮದೇ ಆದ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ, ಕಾರ್ಯಕರ್ತರು ನೇರವಾಗಿ ಜನರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಪವಾರ್ ಹೇಳಿದರು.
2024ರ ಲೋಕಸಭೆ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿರುವುದರಿಂದ ಪಕ್ಷದ ಕಾರ್ಯಕರ್ತರಲ್ಲಿ ನಿರೀಕ್ಷೆ ಹೆಚ್ಚಿದೆ. ಆದರೆ, ಎಲ್ಲ ಮಿತ್ರಪಕ್ಷಗಳು ಹೊಂದಾಣಿಕೆ ಮಾಡಿಕೊಳ್ಳಬೇಕಿದೆ. ಲೋಕಸಭೆ ಚುನಾವಣೆಯಂತೆ ವಿಧಾನಸಭೆ ಚುನಾವಣೆಗೂ ನೀವು ಶ್ರಮಿಸುತ್ತೀರಿ ಎಂದು ಭಾವಿಸುತ್ತೇನೆ ಎಂದು ಪವಾರ್ ತಮ್ಮ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.
ಮಹಾರಾಷ್ಟ್ರದ 40 ಲೋಕಸಭಾ ಸ್ಥಾನಗಳ ಪೈಕಿ ಎಂವಿಎ 30 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ 13, ಶಿವಸೇನೆ (ಯುಬಿಟಿ) 9 ಮತ್ತು ಎನ್‌ಸಿಪಿ (ಎಸ್‌ಪಿ) 8 ಸ್ಥಾನಗಳನ್ನು ಪಡೆದಿದೆ.