Published
3 months agoon
By
Akkare Newsಪುತ್ತೂರು: ಕರ್ನಾಟಕ ಸುವರ್ಣ ಸಂಭ್ರಮ ಆಚರಣೆಯ ಪ್ರಯುಕ್ತ ‘ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ’ ಎಂಬ ಅಭಿಯಾನದ ಅಂಗವಾಗಿ ರಾಜ್ಯಾದ್ಯಂತ ನಡೆಯುತ್ತಿರುವ ‘ಕನ್ನಡ ಜ್ಯೋತಿರಥಯಾತ್ರೆ’ ಪುತ್ತೂರಿಗೆ ಮಂಗಳವಾರ ಆಗಮಿಸಿತು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಪರಿಷತ್ ನ ಬಿ.ಐತ್ತಪ್ಪ ನಾಯ್ಕ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.