Published
3 months agoon
By
Akkare Newsನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಕೊಟ್ಟಿದ್ದಾರೆ.
ಸಾಹಿತಿ ಹಂಪ ನಾಗಾರಾಜಯ್ಯ ಅವರು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಿದ್ದಾರೆ. ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ.
ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ. ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ರಾಝ್ಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಕೆ. ವೆಂಕಟೇಶ್, ಶಿವರಾಜ್ ತಂಗಡಗಿ, ಹೆಚ್.ಕೆ.ಪಾಟೀಲ್, ರಾಮಲಿಂಗ ರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್ ಭಾಗವಹಿಸಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.