Published
3 months agoon
By
Akkare Newsಪಿಲಿಗೊಬ್ಬು ಹಾಗೂ ಪುತ್ತೂರು ಫುಡ್ ಫೆಸ್ಟ್ ಅ.5 ಹಾಗೂ ಅ.6 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಆಯೋಜಿಸಲಾಗಿದೆ ಎಂದು ಪುತ್ತೂರು ವಿಜಯ ಸಾಮ್ರಾಟ್ ನ, ಪಿಲಿಗೊಬ್ಬು ಸಾರಥಿ ಸಹಜ್ ರೈ ಬಳಜ್ಜ ಹೇಳಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಅಶೋಕ್ ಕುಮಾರ್ ರೈ ಮಾಡಲಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ, ಹಿರಿಯ ವೃದ್ಯ ಡಾ.ಪ್ರಸಾದ್ ಭಂಡಾರಿ, ಡಿವೈಎಸ್ ಪಿ ಅರುಣ್ ನಾಗೇಗೌಡ, ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.