ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಹರಿಯಾಣ | ಬಿಜೆಪಿಯ ಹಿರಿಯ ನಾಯಕ ಅಶೋಕ್ ತನ್ವಾರ್ ಕಾಂಗ್ರೆಸ್ ಸೇರ್ಪಡೆ!

Published

on

ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಸಂಸದ ಅಶೋಕ್ ತನ್ವಾರ್ ಗುರುವಾರ ಹರಿಯಾಣದ ಮಹೇಂದ್ರಗಢ ಜಿಲ್ಲೆಯಲ್ಲಿ ರಾಹುಲ್ ಗಾಂಧಿಯವರ ರ‍್ಯಾಲಿಯಲ್ಲಿ ಕಾಂಗ್ರೆಸ್‌ಗೆ ಮರು ಸೇರ್ಪಡೆಗೊಂಡಿದ್ದಾರೆ. ರಾಜ್ಯದಲ್ಲಿ ಚುನಾವಣೆ ನಡೆಯುವ ಎರಡು ದಿನಗಳ ಮೊದಲು ಈ ಬೆಳವಣಿಗೆ ನಡೆದಿದ್ದು, ಆಡಳಿತರೂಢ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ.

ಗುರುವಾರ ಮಹೇಂದರ್‌ಗಢದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್‌ಗೆ ಮರಳಿದ್ದಾರೆ. ರಾಹುಲ್ ಗಾಂಧಿ ತಮ್ಮ ಭಾಷಣ ಮುಗಿಸಲು ಮುಂದಾಗುತ್ತಿದ್ದಂತೆ ಕೆಲ ನಿಮಿಷ ಕಾಯುವಂತೆ ಸಭಿಕರಿಗೆ ವೇದಿಕೆಯಿಂದ ಘೋಷಣೆ ಮಾಡಲಾಯಿತು.

 

 

ಇದಾಗಿ ಕೆಲವೇ ಕ್ಷಣದಲ್ಲಿ, ಈ ವರ್ಷದ ಆರಂಭದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ತನ್ವರ್ ವೇದಿಕೆಗೆ ಆಗಮಿಸಿದ್ದು, “ಇಂದು ಅವರು ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ” ಎಂದು ಘೋಷಿಸಲಾಯಿತು. ರಾಹುಲ್ ಗಾಂಧಿ ಆವರ ನಿಕಟವರ್ತಿ ಎಂದೇ ಪರಿಗಣಿಸಲ್ಪಟ್ಟಿದ್ದ ಅಶೋಕ್ ಅವರು 2019 ರಲ್ಲಿ ಕಾಂಗ್ರೆಸ್ ತೊರೆದಿದ್ದರು.

 

ಪಕ್ಷದ ಹಿರಿಯ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರೊಂದಿಗಿನ ಭಿನ್ನಾಭಿಪ್ರಾಯಗಳ ಕಾರಣಕ್ಕೆ ಅವರು ಪಕ್ಷ ತೊರೆದಿದ್ದರು. ಅಕ್ಟೋಬರ್ 5 ರಂದು ಹರಿಯಾಣ ವಿಧಾನಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಚುನಾವಣೆಯ ಪ್ರಚಾರವು ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಪ್ರಚಾರ ಕೊನೆಗೊಳ್ಳುವ ಕೆಲವೇ ಗಂಟೆಗಳ ಮೊದಲು ಕಾಂಗ್ರೆಸ್‌ಗೆ ಸೇರಿದ್ದಾರೆ.

 

ರಾಜ್ಯದಲ್ಲಿ ದಶಕದ ನಂತರ ಬಿಜೆಪಿಯಿಂದ ಅಧಿಕಾರ ಕಿತ್ತುಕೊಳ್ಳಲು ಮುಂದಾಗಿರುವ ಕಾಂಗ್ರೆಸ್‌ಗೆ ದಲಿತ ನಾಯಕ ಮರಳಿರುವುದು ಪಕ್ಷಕ್ಕೆ ಉತ್ತೇಜನ ನೀಡುವ ಸಾಧ್ಯತೆ ಇದೆ.

 

2021ರಲ್ಲಿ ತನ್ವಾರ್ ಅವರು ತೃಣಮೂಲ ಕಾಂಗ್ರೆಸ್ ಸೇರಿದ್ದರು. ನಂತರ ಅವರು 2022 ರಲ್ಲಿ ಅವರು ಆಮ್ ಆದ್ಮಿ ಪಕ್ಷ (ಎಎಪಿ)ಕ್ಕೆ ಪಕ್ಷಾಂತರಗೊಂಡರು. ಅಷ್ಟೆ ಅಲ್ಲದೆ, ಈ ವರ್ಷದ ಆರಂಭದಲ್ಲಿ ಅವರು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಈ ವೇಳೆ ಅವರು ಪ್ರಧಾನಿಯನ್ನು ಶ್ಲಾಘಿಸಿದ್ದರು. ಅಶೋಕ್ ಅವರು ಕಳೆದ ಐದು ವರ್ಷಗಳಲ್ಲಿ 4 ಪಕ್ಷಗಳಿಗೆ ಪಕ್ಷಾಂತರವಾಗಿದ್ದಾರೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version