Published
3 months agoon
By
Akkare Newsಮಂಗಳೂರು: ಮಾಜಿ ಶಾಸಕ ಮೊಯ್ದಿನ್ ಬಾವಾ ಅವರ ಸಹೋದರ ಮಮ್ತಾಜ್ ಅಲಿ ಅವರು ನಿಗೂಢವಾಗಿ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕಾರು ಪತ್ತೆಯಾಗಿರುವ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭ ಮಾಧ್ಯಮಗಳ ಜತೆ ಮಾತನಾಡಿದ ಅವರು ಮುಮ್ತಾಜ್ ಅವರು ಮುಂಜಾನೆ ಮೂರು ಗಂಟೆಗೆ ಮನೆಯಿಂದ ಬಿಎಂಡಬ್ಲೂ ಕಾರ್ ಚಲಾಯಿಸಿಕೊಂಡು ಬಂದಿದ್ದು ಕುಳೂರು ಸೇತುವೆ ಬಳಿ ಕಾರು ಅಫಘಾತವಾಗಿ ಕಾಣೆಯಾಗಿದ್ದಾರೆ. ಈ ವಿಚಾರ ಮಗಳಿಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಮುಮ್ತಾಜ್ ಸೇತುವೆಯಿಂದ ಕೆಳಗೆ ಹಾರಿರುವ ಬಗ್ಗೆ ಸಂಶಯ ಇದೆ. ಹೀಗಾಗಿ ವಿವಿಧ ತಂಡಗಳು ನದಿಯಲ್ಲಿ ಶೋಧ ಕಾರ್ಯ ಮಾಡುತ್ತಿದ್ದಾರೆ. ಎಫ್ ಎಸ್ ಎಲ್ ಅಧಿಕಾರಿಗಳು ಕಾರು ಪರಿಶೀಲನೆ ಮಾಡಿದ್ದಾರೆ. ಕುಟುಂಬದ ಸದಸ್ಯರಿಂದಲೂ ಕೆಲವೊಂದು ಮಾಹಿತಿಗಳನ್ನು ಸಂಗ್ರಹಿಸಿದ್ದೇವೆ. ಘಟನೆಯ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ ಎಂದು ಪೊಲೀಸ್ ಕಮೀಷನರ್ ತಿಳಿಸಿದ್ದಾರೆ.