Published
2 months agoon
By
Akkare Newsಅಳಕೆಮಜಲು ಕೆಮನಾಜೆ ಎಂಬಲ್ಲಿ ಇಂದು ಹಾಡುಹಗಲೇ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಅಳಕೆಮಜಲು ಕೆಮನಾಜೆ ನಿವಾಸಿ ಪುಷ್ಪರಾಜ್ ಎಂಬವರ ಮನೆಯಿಂದ ಸುಮಾರು 15 ಪವನ್ ಚಿನ್ನ ಮತ್ತು ಕೆಮನಾಜೆ ನಿವಾಸಿ ಕೃಷ್ಣಪ್ಪ ಕುಲಾಲ್ (ಕುಂಞ್ಞಣ್ಣ) ಎಂಬರ ಮನೆಯಿಂದ ಸುಮಾರು 12 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.
ನವರಾತ್ರಿಯ ದಿನವಾಗಿದ್ದರಿಂದ ಇಂದು ಅಳಕೆಮಜಲು ಭಜನಾ ಮಂದಿರದಲ್ಲಿ ಮೂರ್ತಿ ಪ್ರತಿಷ್ಠೆಯಾಗಿ ನವರಾತ್ರಿ ಉತ್ಸವದಲ್ಲಿ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಂಡಿದ್ದರು. ಈ ಸಮಯನ್ನು ದುರುಪಯೋಗಪಡಿಸಿಕೊಂಡ ಕಳ್ಳ ಕದೀಮರು ಮನೆಗೆ ನುಗ್ಗಿ ನಗ-ನಗದು ದೋಚಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.
‘