Published
2 months agoon
By
Akkare Newsಪುತ್ತೂರು: ನರಿಮೊಗರು ಸರಕಾರಿ ಉ.ಹಿ.ಪ್ರಾ.ಶಾಲಾ ಬಳಿ ಅಪಾಯಕಾರಿ ಸ್ಥಿತಿಯಲ್ಲಿದ್ದ ವಿದ್ಯುತ್ ಕಂಬವನ್ನು ತೆರವು ಮಾಡಲಾಗಿದೆ. ಶಾಲಾ ಬಳಿಯಿರುವ ಮರಗಳು ವಿದ್ಯುತ್ ತಂತಿಗಳಿಗೆ ತಾಗುವುದರಿಂದ ಅಪಾಯವನ್ನು ಆಹ್ವಾನಿಸುವ ಸ್ಥಿತಿಯಲ್ಲಿದ್ದು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ವಿದ್ಯುತ್ ಕಂಬವನ್ನು ಸ್ಥಳಾಂತರ ಮಾಡುವಂತೆ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಆಚಾರ್ಯ ನರಿಮೊಗರು ಅವರು ಶಾಸಕ ಅಶೋಕ್ ಕುಮಾರ್ ರೈಯವರಿಗೆ ಮನವಿ ಮಾಡಿದ್ದರು.
ಮನವಿಗೆ ಸ್ಪಂದಿಸಿದ ಶಾಸಕರು ವಿದ್ಯುತ್ ಕಂಬವನ್ನು ಸ್ಥಳಾಂತರ ಮಾಡಲು ಸೂಚನೆ ನೀಡಿದ್ದರು. ಅದರಂತೆ ಅರಣ್ಯ ಇಲಾಖೆ ಸಹಕಾರದೊಂದಿಗೆ ಮೆಸ್ಕಾಂ ಇಲಾಖೆಯವರು ಸ್ಥಳಾಂತರ ಮಾಡಿದ್ದಾರೆ. ಸ್ಥಳೀಯರಾದ ರೋಹಿತ್ ಅವರು ಸಹಕಾರ ನೀಡಿದರು.