Published
2 months agoon
By
Akkare Newsಬಂಟ್ವಾಳ : ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಅಧ್ಯಕ್ಷರಾಗಿ ಶ್ರೀ ಸುರೇಶ್ ಮೈರಡ್ಕ, ಹಾಗೂ ಸಂಚಾಲಕರಾಗಿ ಹಬೀಬ್ ಮಾಣಿ ಮರು ಆಯ್ಕೆಯಾಗಿದ್ದಾರೆ.
ದಿನಾಂಕ 12-10-2024 ರಂದು ಬಿ ಸಿ ರೋಡ್ ಸರಕಾರಿ ನೌಕರರ ಸಭಾಭವನದಲ್ಲಿ ಜರಗಿದ ಸಭೆಯಲ್ಲಿ ಸರ್ವಾನುಮತದಿಂದ ಮರು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೌರವ ಅಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷರಾದ ರಾಕೇಶ್ ಮಲ್ಲಿ, ಕಾರ್ಯದರ್ಶಿ ಚಂದ್ರಶೇಖರ್ ಕರ್ಣ ಮದ್ವ, ಕಾರ್ಯಾಧ್ಯಕ್ಷ ರಾದ ಚಂದ್ರ ಹಾಸ ಶೆಟ್ಟಿ, ಮುಖ್ಯ ಸಲಹೆಗಾರರಾದ ಪುರುಷೋತ್ತಮ ಪೂಜಾರಿ, ರತನ್ ಕುಮಾರ್, ರಾಷ್ಟ್ರೀಯ ಕಬ್ಬಡಿ ತೀರ್ಪುಗಾರರಾದ ವಸಂತ್ ವಿಟ್ಲ ಹಾಗೂ ಬಾಬು ಮಾಸ್ಟರ್ ಉಪಸ್ಥಿತರಿದ್ದರು.