Published
2 months agoon
By
Akkare Newsಸುಳ್ಯ: ರಾತ್ರಿ ಮಲಗಿರುವಾಗ ಮಹಿಳೆ ಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ, ಕೊಲೆಗೆ ಯತ್ನಿಸಿರುವ ಘಟನೆ ನಡೆದಿರುವುದು ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಿಳಿದು ಬಂದಿದೆ.
ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ಅ.14 ರಂದು ಈ ಘಟನೆ ನಡೆದಿದೆ.
ಜಯಭಾರತಿ (56) ಎಂಬವರು ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಭಾವ ಶಂಕರ ಎಂಬಾತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.
ಗಂಭೀರ ಗಾಯಗೊಂಡ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬೆಂಕಿ ಹಚ್ಚಿರುವ ವ್ಯಕ್ತಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಟುಂಬಿಕ ವಿವಾದದ ಹಿನ್ನಲೆಯಲ್ಲಿ ಕೃತ್ಯ ಎಸಗಿರುವ ಬಗ್ಗೆ ಶಂಕಿಸಲಾಗಿದೆ. ಬೆಳ್ಳಾರೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.