Published
2 months agoon
By
Akkare Newsಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಲಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಭಾಗಮಂಡಲ ಗ್ರಾ.ಪಂ. ಅಧ್ಯಕ್ಷರಾದ ಕಾಳನ ರವಿ ಇತರರು ಪಾಲ್ಗೊಳ್ಳಲಿದ್ದಾರೆ.