Published
2 months agoon
By
Akkare Newsಪುತ್ತೂರು: ನ.2 ರಂದು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿನಡೆಯಲಿರುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಯಿತು.
ಶುಕ್ರವಾರ ಬೆಂಗಳೂರಿನಲ್ಲಿ ಇಬ್ಬರನ್ನು ಭೇಟಿಯಾದ ಶಾಸಕರು ಪುತ್ತೂರಿನ ಐತಿಹಾಸಿಕ ಈ ಕಾರ್ಯಕ್ರಮಕ್ಕೆ ಬಂದು ಹಾರೈಸುವಂತೆ ಶಾಸಕರುಮನವಿ ಮಾಡಿದರು. ಕಾರ್ಯಕ್ರಮಕ್ಕೆ ಬರುವುದಾಗಿ ಇಬ್ಬರೂ ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.
ವರ್ಷಂಪ್ರತಿ ದೀಪಾವಳಿ ಪ್ರಯುಕ್ತ ನಡೆಯುವ ವಸ್ತ್ರದಾನ ಹಾಗೂ ಸಹಭೋಜನ ಕಾರ್ಯಕ್ರಮದಲ್ಲಿ ಈ ಬಾರಿ 75000 ಮಿಕ್ಕಿ ಮಂದಿಗೆ ವಸ್ತ್ರದಾನ ನಡೆಯಲಿದೆ. ಬಹಳ ಅದ್ದೂರಿಯಾಗಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಪ್ರಮುಕರಾಜಕೀಯ ನೇತಾರರುಭಾಗವಹಿಸಲಿದ್ದಾರೆ.