Published
2 months agoon
By
Akkare Newsಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್‌ನಲ್ಲಿ ಅ.24ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ನೆಲ್ಲಿಕಟ್ಟೆ, ಎಂ.ಟಿ ರೋಡ್, ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಹತ್ತಿರ, ಅರುಣಾ ಥಿಯೇಟರ ಹತ್ತಿರ, ಸೂತ್ರಬೆಟ್ಟು, ಎಪಿಎಂಸಿ ರಸ್ತೆ, ಬೊಳ್ವಾರು ಜಂಕ್ಷನ್, ಶ್ರೀ ವೆಂಕಟ್ರಮಣ ದೇವಸ್ಥಾನದ ಹತ್ತಿರ ಮತ್ತು ಧರ್ಮಸ್ಥಳ ಕಟ್ಟಡ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.