Published
2 months agoon
By
Akkare Newsಬೆಂಗಳೂರು : ಉಪ ಚುನಾವಣೆ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.
ಈಗಾಗಲೇ ಬಿಜೆಪಿ ಎರಡು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದು, ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿರುವ ಮಾಜಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ಅವರು ಚನ್ನಪಟ್ಟಣ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿದ್ದು, ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವೈಶಾಲಿ ಕುಲಕರ್ಣಿ ಅವರಿಗೆ ಟಿಕೆಟ್ ಲಭಿಸಿದೆ.
ಸಂಡೂರು ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದ ಕಾಂಗ್ರೆಸ್ ಶಾಸಕ ಈ.ತುಕಾರಾಮ್, ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಚುನಾಯಿತರಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಈ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷವು ತುಕಾರಾಮ್ ಅವರ ಪತ್ನಿ ಅನ್ನಪೂರ್ಣಾರಿ ಅವರನ್ನು ಕಣಕ್ಕಿಳಿಸಿದೆ.