Published
2 months agoon
By
Akkare Newsಪುತ್ತೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಅ.26 ಶನಿವಾರ ಪುತ್ತೂರು ಜೈನಭವನದಲ್ಲಿ ನಡೆಯಲಿದೆ.
ಕಿಶೋರ್ ಕುಮಾರ್ ಪುತ್ತೂರು ಅವರನ್ನು ಕಬಕದಲ್ಲಿ ಸ್ವಾಗತಿಸಿದ ಬಳಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಲಿದ್ದು, ಬಳಿಕ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಮಾರಂಭದಲ್ಲಿ ಸಂಸದರು, ಜಿಲ್ಲೆಯ, ಮಂಡಲದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.