Published
2 months agoon
By
Akkare Newsಬೆಂಗಳೂರು: ನವೆಂಬರ್.1ರಂದು ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೂಚಿಸಿರುವಂತೆ, ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷಗಳು ಸಂದಿರುವ ಈ ಶುಭ ಸಂದರ್ಭದಲ್ಲಿ ಎಲ್ಲಾ ಶಾಲೆಗಳಲ್ಲಿ ನವಂಬರ್-1 ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವನ್ನು ಆಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿರುತ್ತದೆ ಎಂದಿದ್ದಾರೆ.
ಈ ಹಿನ್ನಲೆಯಲ್ಲಿ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ಧ್ವಜಸಂಹಿತೆಯನ್ವಯ ಧ್ವಜಾರೋಹಣ ಮಾಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ 69ನೇ ಕನ್ನಡ ರಾಜ್ಯೋತ್ಸವವನ್ನು ಯಶಸ್ವಿಯಾಗಿ ಆಚರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.