Published
2 months agoon
By
Akkare Newsಕಡಬ : ಐತ್ತೂರು ಗ್ರಾಮದ ಮಾಯಿಪಾಜೆ ಎಂಬಲ್ಲಿ ಕುಮಾರಧಾರಾ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿರುವ ಪೊಲೀಸರು ಮರಳು ಸಮೇತ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿರುವ ಪೊಲೀಸರು ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಶಪಡಿಸಿಕೊಂಡು ಗಣಿ ಇಲಾಖೆಗೆ ಪ್ರಕರಣವನ್ನು ಹಸ್ತಾಂತರಿಸಿದ್ದಾರೆ.
ಪಿಕಪ್ ವಾಹನ ಸ್ಥಳೀಯ ಅಜಯ್ ಎಂಬವರಿಗೆ ಸೇರಿದ್ದಾಗಿದೆ ಎಂದು ಕಡಬ ಪೊಲೀಸರು ತಿಳಿಸಿದ್ದಾರೆ.