Published
2 months agoon
By
Akkare Newsಬೆಳಕಿನ ಹಬ್ಬಕ್ಕೆ ಮುನ್ನವೇ ಪಟಾಕಿ ಕಿಡಿ ಹೊತ್ತಿ ಉರಿದು ಅಗ್ನಿ ಅವಘಡ ಸಂಭವಿಸಿರುವ ಘಟನೆ ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಎಂಬಲ್ಲಿ ನಡೆದಿದೆ. ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕೆಟ್ಟ್ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿ ಉರಿದು 150 ಕ್ಕೂ ಮಿಕ್ಕ ಮಂದಿಗೆ ಗಾಯವಾಗಿದ್ದು, ಅವರಲ್ಲಿ 8 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಮೂವಳಂಕುಳಿ ಚಾಮುಂಡಿ ತೆಯ್ಯಂನ ಕುಳಿಚು ತೊಟ್ಟಂ ಆಚರಣೆಯ ವೇಳೆ ಮಧ್ಯರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ ಎಂಬುದಾಗಿ ವರದಿಯಾಗಿದೆ. ಬೆಂಕಿ ಕಿಡಿಯಿಂದ ಪಟಾಕಿ ಸ್ಪೋಟಗೊಂಡಿದೆ. ಗಾಯಾಳುಗಳನ್ನು ಕಾಞಂಗಾಡ್ ಜಿಲ್ಲಾ ಆಸ್ಪತ್ರೆ ಹಾಗೂ ನೀಲೇಶ್ವರ, ಕಾಞಂಗಾಡ್‌ನ ವಿವಿಧ ಖಾಸಗಿ ಆಸ್ಪತ್ರೆ ಮತ್ತು ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಈ ಪೈಕಿ ಗಂಭೀರವಾಗಿ ಗಾಯಗೊಂಡ ಮೂವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ಮಂದಿ ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಂದು ಪೊಲೀಸರ ಮೂಲಗಳಿಂದ ತಿಳಿದು ಬಂದಿದೆ.