Published
2 months agoon
By
Akkare Newsರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ ನವೆಂಬರ್ 13 ರಂದು ನಡೆಯಲಿದ್ದು ಈ ಸಂದರ್ಭದಲ್ಲಿ ಶಿಗ್ಗಾoವಿ ವಿಧಾನಸಭಾ ಕ್ಷೇತ್ರಕ್ಕೆ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಚುನಾವಣಾ ಪ್ರಭಾರಿಯಾಗಿ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ ಇವರನ್ನು ನಿಯೋಜನೆ ಮಾಡಲಾಗಿದೆ.
ರಾಜ್ಯಾಧ್ಯಕ್ಷರಾದ ಬಿ ವೈ ವಿಜೇಯೇಂದ್ರರವರ ಸೂಚನೆಯಂತೆ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯರವರು ಈ ಜವಾಬ್ದಾರಿಯನ್ನು ನಿರ್ವಹಿಸಲು ಸೂಚಿಸಿದ್ದಾರೆ. ಶಿಗ್ಗಾoವಿಯಲ್ಲಿ ಎನ್ ಡಿ ಎ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಮಗ ಭರತ್ ಬೊಮ್ಮಾಯಿ ಚುನಾವಣಾ ಕಣದಲ್ಲಿದ್ದಾರೆ.