Published
2 months agoon
By
Akkare Newsಪುತ್ತೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನ.2ರಂದು ದ.ಕ. ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಗ್ಗೆ 10:15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಮಧ್ಯಾಹ್ನ 12ಕ್ಕೆ ಪುತ್ತೂರಿನಲ್ಲಿ ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2ಕ್ಕೆ ಪುತ್ತೂರಿನಿಂದ ನಿರ್ಗಮಿಸುವ ಅವರು ಸಂಜೆ 4ಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವರು. ರಾತ್ರಿ 8:40ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ವಿಮಾನ ಮೂಲಕ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.