Published
2 months agoon
By
Akkare Newsಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಹಾಗೂ ನಟ ಗುರುಪ್ರಸಾದ್ ಭಾನುವಾರ ನಿಧನರಾಗಿದ್ದು, ಆತ್ಯಹತ್ಯೆ ಎಂದು ಶಂಕಿಸಲಾಗಿದೆ.
ಮಠ, ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಗುರುಪ್ರಸಾದ್ ಅವರಿಗೆ 50 ವರ್ಷ ವಯಸ್ಸಾಗಿತ್ತು.
ನಿರ್ದೇಶಕ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು, ಅವರ ಸಾವಿಗೆ ಸಾಲಗಾರರ ಕಾಟವೇ ಕಾರಣ ಎಂದು ಹೇಳಲಾಗಿದೆ. ಮಾದನಾಯಕಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುಪ್ರಸಾದ್ ಅವರು ಸಾಲಗಾರರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.