ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಸರಕಾರಿ ಕಚೇರಿ, ಆವರಣಗಳಲ್ಲಿ ತಂಬಾಕು ಉತ್ಪನ್ನ ಬಳಕೆ ನಿಷೇಧ

Published

on

ಸಿಗರೇಟ್‌, ಗುಟ್ಕಾ ಇತ್ಯಾದಿ ಸೇವಿಸಿದರೆ ಶಿಸ್ತುಕ್ರಮ

ಬೆಂಗಳೂರು : ಸರಕಾರಿ ಕಚೇರಿಗಳಲ್ಲಿ, ಕಚೇರಿಯ ಆವರಣಗಳಲ್ಲಿ ಧೂಮಪಾನ ಹಾಗೂ ಇತರ ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಿ ರಾಜ್ಯ ಸರಕಾರ ಖಡಕ್ ಆದೇಶ ಹೊರಡಿಸಿದೆ.
ಈ ಕುರಿತು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆ ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ಉತ್ಪಾದನೆ, ಪೂರೈಕೆ, ಮಾರಾಟ ನಿಯಂತ್ರಣ ಕಾಯ್ದೆಯಡಿ ಸರಕಾರಿ ಕಚೇರಿ ಮತ್ತು ಕಚೇರಿಗಳ ಆವರಣದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.


ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ. ಶಾಸನಾತ್ಮಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಪರೋಕ್ಷ ಧೂಮಪಾನದಿಂದ ಸಾರ್ವಜನಿಕರನ್ನು ಹಾಗೂ ಸರ್ಕಾರಿ ಸಿಬ್ಬಂದಿಯನ್ನು ರಕ್ಷಿಸುವ ಉದ್ದೇಶದಿಂದ ಯಾವುದೇ ಸರ್ಕಾರಿ ನೌಕರ ಸರ್ಕಾರಿ ಕಚೇರಿಯಲ್ಲಿ ಹಾಗೂ ಕಚೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಎಚ್ಚರಿಕೆಯ ಫಲಕವನ್ನು ಕಚೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಸೂಚನೆಗಳನ್ನು ಉಲ್ಲಂಘಿಸಿ ಸರ್ಕಾರಿ ನೌಕರ ಕಚೇರಿಯಲ್ಲಿ ಅಥವಾ ಕಚೇರಿಯ ಆವರಣದಲ್ಲಿ ಧೂಮಪಾನ ಮಾಡುವುದು ಮತ್ತು ಯಾವುದೇ ತಂಬಾಕು ಉತ್ಪನ್ನವನ್ನು (ಗುಟ್ಕಾ, ಪಾನ್ ಮಸಾಲ, ಹೊಗೆಸೊಪ್ಪು ಇತ್ಯಾದಿ) ಸೇವಿಸುವುದು ಕಂಡುಬಂದಲ್ಲಿ ಅಂತಹ ನೌಕರನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version