Published
2 months agoon
By
Akkare Newsಪುತ್ತೂರು: ಗ್ರಾಮೀಣ ಪ್ರದೇಶಗಳಲ್ಲಿ ಪ್ರತೀ ಮನೆಗಳಿಗೆ ಕುಡಿಯುವ ನೀರಿನ ಪೂರೈಕೆಗಾಗಿ ಜಲ ಜೀವನ್ ಮಿಷನ್ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಕುಡಿಯುವ ನೀರನ್ನು ದುರ್ಬಳಕೆ ಮಾಡದೇ ಮಿತವಾಗಿ ಬಳಸಿ ಪ್ರತೀ ಮನೆಗಳಿಗೆ ತಲುಪುವಂತೆ ಹಾಗೂ ದುರ್ಬಳಕೆ ಮಾಡುವವರ ಮೇಲೆ ಗ್ರಾಮ ಪಂಚಾಯತ್‌ಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಹೇಳಿದರು.
ಅವರು ಗುರುವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಜಲಜೀವನ್ ಮಿಷನ್ ಯೋಜನೆಯಡಿ ಐಇಸಿ/ಹೆಚ್.ಆರ್.ಡಿ ಚಟುವಟಿಕೆಗಳನ್ನು ನಡೆಸಲು ಗ್ರಾಮ ಪಂಚಾಯತ್‌ಗಳ ನೀರು ಮತ್ತು ನೈರ್ಮಲ್ಯ ಸಮಿತಿಯ ಮಹಿಳಾ ಸದಸ್ಯರಿಗೆ ಒಂದು ದಿನದ ಸಾಮರ್ಥ್ಯಾಭಿವೃದ್ಧಿ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿ ಮನೆಗೆ ಅಗತ್ಯ ಕುಡಿಯುವ ನೀರನ್ನು ಪೂರೈಸುವುದು ಹಾಗೂ ನಳ್ಳಿ ನೀರಿನ ಮಾಸಿಕ ಬಿಲ್ಲು ವಸೂಲಾತಿಯನ್ನು ಕಡ್ಡಾಯವಾಗಿ ನಿರ್ವಹಿಸುವ ಜವಾಬ್ದಾರಿ ಈ ಸಮಿತಿಯದ್ದಾಗಿದೆ ಎಂದು ತಿಳಿಸಿದರು.