Published
1 month agoon
By
Akkare Newsಅಪಘಾತದಿಂದ ಪೂರ್ಣ ಹಾನಿಯಾಗಿರುವ ಸ್ಕೂಟಿ
ಸುಳ್ಯ : ಸುಳ್ಯ- ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಸ್ಕೂಟಿ ಹಾಗೂ ಬಸ್ ಡಿಕ್ಕಿಯಾಗಿ ಇಬ್ಬರು ಯುವತಿಯರು ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದರು.
ಈ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾಡುತೋಟ ನಾರಾಯಣ ಕಾಡುತೋಟರವರ ಮಗಳು ರಚನ ಕಾಡುತೋಟ ಇದೀಗ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಇನ್ನೊರ್ವ ಸಹ ಸವಾರೆ ಜೂನಿಯರ್ ಕಾಲೇಜ್ ವಿದ್ಯಾರ್ಥಿನಿ ಅನನ್ಯ ಅವರ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ ವಿದ್ಯಾರ್ಥಿನಿ ಪುತ್ತೂರು ವಿವೇಕಾನಂದ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಹೆಚ್ಚಿನ ವಿವರ ಲಭಿಸಿಲ್ಲ.