Published
1 year agoon
By
Akkare News
ಉಪ್ಪಿನಂಗಡಿ : ನೆರೆಮನೆಯವರೊಂದಿಗಿನ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ನೆಲ್ಯಾಡಿ ಸಮೀಪದ ಗೋಳಿತ್ತೊಟ್ಟುವಿನಲ್ಲಿ ನಡೆದಿದೆ.
ಕಡಬ ತಾಲೂಕು ಗೋಳಿತ್ತೊಟ್ಟು ಗ್ರಾಮದ ಅಲಾಂತಾಯ ನಿವಾಸಿ ವೆಂಕಪ್ಪ ಗೌಡರ ಪುತ್ರ ರಮೇಶ್ (51 ವ) ಕೊಲೆಯಾದವರು. .
ನೆರೆಮನೆಯ ಸಂಬಂಧಿ ಹರೀಶ ಎಂಬಾತ ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪಿ ಎಂದು ತಿಳಿದು ಬಂದಿದೆ. ಕೊಲೆಗೆ ಜಾಗದ ತಕರಾರು ಕಾರಣ ಎನ್ನಲಾಗಿದ್ದು ಈ ಬಗ್ಗೆ ಖಚಿತ ಮಾಹಿತಿ ತಿಳಿದಿಲ್ಲ, ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಬೈಕ್ ರಸ್ತೆಯಲ್ಲೇ ಬಿದ್ದಿರುವುದು ಕಂಡು ಬಂದಿದೆ. ಇನ್ನು ಸ್ಥಳದಲ್ಲಿ ಅಧಿಕ ಸಂಖ್ಯೆಯಲ್ಲಿ ಜನ ಸೇರಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಅಪ್ ಡೇಟ್ ಮಾಡಲಾಗುವುದು.