Published
2 years agoon
By
Akkare News
ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಕಾಸರಗೋಡು ಬಳಿ ನಡೆದಿದ್ದು, ಈ ಘಟನೆಯ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಬೊಂಡಾಲ ಚಿತ್ತರಂಜನ್ ಶೆಟ್ಟಿ ಪ್ರಧಾನ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಇವರು ಜಗದ್ಗುರು ಶಂಕರಾಚಾರ್ಯ ತೋಟಕಾಚಾರ್ಯ ಎಡನೀರು ಮಠಾಧೀಶ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರ ವಾಹನವನ್ನು ಅಡ್ಡಕಟ್ಟಿ ದುಷ್ಕರ್ಮಿಗಳು ಕೇರಳದ ಕಾಸರಗೋಡಿನ ಬೋವಿಕನಾದ ಬಾವಿಕೆರೆ ಎಂಬಲ್ಲಿ ಅಕ್ರಮಣದ ಹೀನ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ.


ಇಂತಹ ದುಷ್ಕೃತ್ಯಗಳು ನಡೆಯದಂತೆ ಕೇರಳ ಸರ್ಕಾರ ಕಾಳಜಿ ವಹಿಸಬೇಕು ಮತ್ತು ತಪ್ಪಿತಸ್ಥರನ್ನು ಬಂಧಿಸಿ, ಶ್ರೀಗಳಿಗೆ ಸೂಕ್ತ ಭದ್ರತೆಯನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.








