Published
1 month agoon
By
Akkare Newsವಿಟ್ಲ : ಬಂಟ್ವಾಳ ತಾಲೂಕಿನ ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ರೂ 2 ಲಕ್ಷ ಮಂಜುರಾಗಿದ್ದು, ಸದರಿ ಚೆಕ್ಕನ್ನು ವಿಟ್ಲ ಶ್ರೀ ಯೋಗೀಶ್ವರ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ರಾಜಗುರು ಶ್ರದ್ಧಾನಾಥಾಜಿ ಮಠಾಧೀಶರಿಗೆ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಯೋಜನಾಧಿಕಾರಿ ರಮೇಶ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಯಶವಂತ್ ವಿಟ್ಲ, ಸಮಿತಿಯ ಕಾರ್ಯಾಧ್ಯಕ್ಷರಾದ ಸುರಕ್ಷಾ ಹೆಲ್ತ್ ಸೆಂಟರ್ ನ ಡಾ. ಗೀತಾ ಪ್ರಕಾಶ್,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಲ್, ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ನವೀನ್ ಚಂದ್ರ,ವಲಯ ಮೇಲ್ವಿಚಾರಕರಾಕಿ ಸರಿತಾ, ಉಪಸ್ಥಿತರಿದ್ದರು.