Published
1 month agoon
By
Akkare News
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಗೆ ಇದೀಗ ಹೈಕೋರ್ಟ್ ಜಾಮೀನು ಮಂಜೂರಿ ಮಾಡಿದೆ
ಬೇಲೇಕೇರಿ ಅದಿರು ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇತ್ತೀಚೆಗೆ ಆದೇಶ ನೀಡಿತ್ತು. ಶಾಸಕ ಸತೀಶ್ ಸೈಲ್ ಸೇರಿ ಎಲ್ಲ ಏಳು ಮಂದಿ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣ ಪ್ರಕಟ ಮಾಡಿತ್ತು. ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಶಾಸಕ ಸತೀಶ್ ಸೈಲ್ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ ಶಾಸಕ ಸತೀಶ್ ಸೈಲ್ ಸೇರಿ ಎಲ್ಲಾ ಆರೋಪಿಗಳಿಗೂ ಜಾಮೀನು ನೀಡಿ ಆದೇಶ ಹೊರಡಿಸಿದೆ. ಮಾತ್ರವಲ್ಲ ಈ ಹಿಂದೆ ಸೆಷನ್ ಕೋರ್ಟ್ ನೀಡಿದ್ದ ತೀರ್ಪನ್ನು ಅಮಾನತ್ತು ಮಾಡಿದೆ.