Published
1 month agoon
By
Akkare Newsಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿಯೋರ್ವರು ಮೃ*ತಪಟ್ಟಿದ್ದಾರೆ.
ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಮೃ*ತಪಟ್ಟವರು. ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದುಬಿದ್ದಿದ್ದರು. ಅವರನ್ನು ಕೂಡಲೇ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ನುರಿತ ವೈದ್ಯರ ತಂಡ ತಿಳಿಸಿದ್ದರು.
ಅನಾಫಿಲ್ಯಾಕ್ಟಿಕ್ ರಿಯಾಕ್ಷನ್ ಗ್ಲೋರಿಯಾ ಅವರಿಗೆ ಫುಡ್ ಅಲರ್ಜಿ(ಅನಾಫಿಲ್ಯಾಕ್ಟಿಕ್ ರಿಯಾಕ್ಷನ್) ಸಮಸ್ಯೆ ಇತ್ತು. ಇದರಿಂದಾಗಿ ಈ ಹಿಂದೆಯೂ ಸ್ವಲ್ಪ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆ ಉಂಟಾಗಿ ಬಳಿಕ ಚೇತರಿಸಿಕೊಂಡಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ನಿಧನರಾದ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ ಅವರ ಅಂಗಾಂಗಳನ್ನು ಆಸ್ಪತ್ರೆಯಲ್ಲಿ ವಿವಿಧ ಸ್ವೀಕೃತದಾರರಿಗೆ ರವಾನಿಸಲಾಗಿದೆ. ಮೃ*ತರ ಕುಟುಂಬದ ಒಪ್ಪಿಗೆಯಂತೆ ಅಂಗಾಂಗ ದಾನ ಮಾಡಲಾಯಿತು.