ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಪಡಿಬಾಗಿಲು ಶಾಲಾ ನೂತನ ವಿವೇಕ ತರಗತಿ ಕೊಠಡಿ ಹಾಗೂ ಎಂ ಆರ್ ಪಿ ಎಲ್ ಸಂಸ್ಥೆಯ ಅನುದಾನದಿಂದ ನಿರ್ಮಾಣವಾದ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

Published

on

ವಿಟ್ಲ : ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ಪಡಿಬಾಗಿಲು ಇಲ್ಲಿ ನೂತನವಾಗಿ ನಿರ್ಮಾಣವಾದ ವಿವೇಕ ತರಗತಿ ಕೊಠಡಿ ಹಾಗೂ ಎಂ ಆರ್ ಪಿ ಎಲ್ ಸಂಸ್ಥೆಯ ಸಿ ಎಸ್ ಆರ್ ಅನುದಾನದಿಂದ ನಿರ್ಮಾಣವಾದ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ದಿನಾಂಕ 16- 11 -2024 ಶನಿವಾರ ಬೆಳಿಗ್ಗೆ ಗಂಟೆ 11ಕ್ಕೆ ನೆರವೇರಲಿರುವುದು.

 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಘವ ಮಣಿಯಾಣಿ ವಹಿಸಲಿದ್ದು, ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದ ಯು ಟಿ ಖಾದರ್ ಪರೀದ್ ರವರ ಫನಉಪಸ್ಥಿತಿ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಎಸ್ ರವರ ಗೌರವ ಉಪಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟನೆ ಮಾಡಲಿರುವರು.

 

ವಿವೇಕ ತರಗತಿ ಕೊಠಡಿಯ ಉದ್ಘಾಟನೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ನೆರವೇರಿಸಲಿದ್ದು, ಎಂ ಆರ್ ಪಿ ಎಲ್ ಸಂಸ್ಥೆಯ ಸಿ ಎಸ್ ಆರ್ ಪಂಡನಿಂದ ನಿರ್ಮಾಣವಾದ ತರಗತಿ ಕೊಠಡಿಗಳ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜಿಸ್ ಚೌಟ ಹಾಗೂ ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಮಾಡಲಿರುವರು.

 

 

 

 

ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರುಗಳಾದ ಎಸ್ ಎಲ್ ಭೋಜೇಗೌಡ, ಹರೀಶ್ ಕುಮಾರ್, ಧನಂಜಯ ಸರ್ಜಿ, ಕಿಶೋರ್ ಕುಮಾರ್ ಪುತ್ತೂರು, ಐವನ್ ಡಿಸೋಜ, ಬಂಟ್ವಾಳ ನಗರ ಯೋಜನ ಪ್ರಾಧಿಕಾರದ ಅಧ್ಯಕ್ಷರಾದ ಬೇಬಿ ಕುಂದರ್, ಎಂ ಅರ ಪಿ ಎಲ್ ಸಂಸ್ಥೆಯ ಜಿ ಜಿ ಎಂ ಕೃಷ್ಣ ಹೆಗಡೆ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥನ್ ಎಂ ಬಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನೋಣಯ್ಯ ನಾಯ್ಕ, ಕೇಪು ಗ್ರಾಮ ಪಂಚಾಯತ್ ಸದಸ್ಯರುಗಳಾದ ಜಗಜೀವನ್ ರಾಮ್ ಶೆಟ್ಟಿ, ಪುರುಷೋತ್ತಮ ಗೌಡ, ಮೋಹಿನಿ, ವಿಶಾಲಾಕ್ಷಿ, ಕೇಪು ಪಂಚಾಯತಿನ ಮಾಜಿ ಅಧ್ಯಕ್ಷರಾದ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ವಿದ್ಯಾಸಿರಿ ಶಿಕ್ಷಣ ಕೇಂದ್ರ ಪಡಿಬಾಗಿಲು ಪ್ರಭಾಕರ ಶೆಟ್ಟಿ ದಂಬೆಕಾನ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ಕರ್ನಾಟಕ ನೌಕರರ ಸಂಘ ಬಂಟ್ವಾಳ ತಾಲೂಕು ಅಧ್ಯಕ್ಷ ಉಮನಾಥ ರೈ ಮೇರಾವು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬಂಟ್ವಾಳ ತಾಲೂಕು ಅಧ್ಯಕ್ಷ ಜಯರಾಮ, ಶಿಕ್ಷಣ ಸಂಯೋಜಕ ಶ್ರೀಮತಿ ಸುಧಾ, ಮೊದಲಾದವರು ಭಾಗವಹಿಸಲಿರುವರು ಎಂದು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ವಿಶಾಲಾಕ್ಷಿ, ವಿದ್ಯಾಸಿರಿ ಶಿಕ್ಷಣ ಕೇಂದ್ರ ಪಡಿಬಾಗಿಲು ಅಧ್ಯಕ್ಷ ಪ್ರಭಾಕರ ಶೆಟ್ಟಿ ದಂಬೆಕಾನ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸುಜಾತ ಕೆ ರೈ, ಹಾಗೂ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಪ್ರೀತ್ ಶೆಟ್ಟಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement