Published
1 month agoon
By
Akkare Newsಪುತ್ತೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯನ್ನು ನಿಂದಿಸಿ ವಾಟ್ಸಪ್ ಸ್ಟೇಟಸ್ ಹಾಕಿದ ಪಾಪೆಮಜಲು ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ಹರಿಪ್ರಸಾದ್ ಎಂಬವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಶಿಕ್ಷಕ ಹರಿಪ್ರಸಾದ್ ಎಂಬವರು ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ನಿಂದಿಸಿ, ಸರಕಾರವನ್ನು ಅಪಮಾನಿಸುವ ರೀತಿಯಲ್ಲಿ ಮತ್ತು ಸಚಿವ ಜಮೀರ್ ಅಹ್ಮದ್‌ರ ಬಗ್ಗೆ ಕೀಳು ಮಟ್ಟದ ಪದ ಬಳಕೆ ಮಾಡಿರುವ ಪೋಸ್ಟರನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದು ಇವರ ವಿರುದ್ದ ಕಾನೂನು ಕ್ರಮ ಕೈಗೊಂಡು ಶಿಕ್ಷಕ ವೃತ್ತಿಯಿಂದ ಅಮಾನತುಗೊಳಿಸುವಂತೆ ಮನವಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಪ್ರ.ಕಾರ್ಯದರ್ಶಿಗಳಾದ ಅರ್ಶದ್ ದರ್ಬೆ ಹಾಗೂ ಪೂರ್ಣೇಶ್ ಭಂಡಾರಿ, ಉಪಾಧ್ಯಕ್ಷ ರೋಶನ್ ರೈ ಬನ್ನೂರು, ಸಂಘಟನಾ ಕಾರ್ಯದರ್ಶಿ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಸೇವಾದಳದ ಬ್ಲಾಕ್ ಅಧ್ಯಕ್ಷ ವಿಶ್ವಜಿತ್ ಅಮ್ಮುಂಜೆ ಉಪಸ್ಥಿತರಿದ್ದರು.