ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಪಘಾತ

ಕಾವು : ಸ್ಕೂಲ್‌ ಬಸ್ಸಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯಲ್ಲಿದ್ದ ಮನೆಗೆ ನುಗ್ಗಿದ್ದ ಬಸ್ಸು

Published

on

ಕಾವು : ನ 21: ಶಾಲಾ ಬಸ್ಸಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ  ಮದುವೆಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಬಸ್ಸು ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದ್ದ ಘಟನೆ ಇಂದು ಬೆಳಿಗ್ಗೆ ಕಾವು ಸಮೀಪದ ಅಮ್ಚಿನಡ್ಕ  ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಮನೆ ಸಂಪೂರ್ಣ ಜಖಂಗೊಂಡಿದ್ದು, ಮನೆಯಲ್ಲಿದ್ದವರಿಗೆ ಹಾಗೂ ಪ್ರಯಾಣಿಕರಿಗೆ ಯಾವುದೇ ಆಪಾಯ ಸಮಭವಿಸಿಲ್ಲ ಎನ್ನುವ ಪ್ರಾಥಮಿಕ ಮಾಹಿತಿ ಲಭಿಸಿದೆ.

 

ಅಪಘಾತವು ಸುಳ್ಯ ಪುತ್ತೂರು ರಸ್ತೆಯ ಅಮ್ಚಿನಡ್ಕ ಬಳಿ ಸಂಭವಿಸಿದೆ. ಮದುವೆಗೆ ತೆರಳುವ ಪ್ರಯಾಣಿಕರನ್ನು ಕೊಂಡು ಹೋಗುತ್ತಿದ್ದ ಬಸ್ಸು ಪುತ್ತೂರಿನಿಂದ ಸುಳ್ಯದ ಕಡೆಗೆ ಹೋಗುತಿತ್ತು.

 

 

ಮಧುರ ಇಂಟರ್‌ ನ್ಯಾಷನಲ್‌ ಸ್ಕೂಲ್‌ ಗೆ ಸೇರಿದ ಬಸ್ಸು ಸುಳ್ಯದಿಂದ ಪರ್ಲಂಪಾಡಿಗೆ ಮಕ್ಕಳನ್ನು ಕರೆದುಕೊಂಡು ಬರಲು ತೆರಳುತಿತ್ತು. ಅದು ಅಮ್ಚಿನಡ್ಕ ಬಳಿ ಪೆರ್ಲಂಪಾಡಿ ಕಡೆಗೆ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ  ಮದುವೆ ಬಸ್ಸು ಬಂದಿದ್ದು, ಅದರ ಚಾಲಕ  ಸ್ಕೂಲ್‌ ಬಸ್ಸಿಗೆ ಢಿಕ್ಕಿ ಹೊಡೆಯುವದನ್ನು ತಪ್ಪಿಸಲು ಇನ್ನೊಂದು ಬದಿಗೆ ವಾಹನವನ್ನು ತಿರುಗಿಸಿದ್ದಾರೆ.

 

 

 

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದೆ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ . ಹೀಗಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ . ಇನ್ನು ಬಸ್ಸಿನಲ್ಲಿದ್ದವರಿಗೂ ಸಣ್ಣಪುಟ್ಟ ತರಚು ಗಾಯಗಳಾಗಿದೆ ಹೊರತು ಯಾವುದೇ ಗಂಭೀರ ಅಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.

 

ಮದುವೆ ಬಸ್ಸಿನ ಚಾಲಕ ಸ್ಕೂಲ್‌ ಬಸ್ಸಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಿದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement